
ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಬಾಗಿಲು ನಿವಾಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಹೆಡ್‌ಕಾನ್ಸ್ಟೇಬಲ್ ಮತ್ತು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಂಧ್ಯಾಮಣಿ ಹಾಗೂ ದಿ.ಯೋಗೀಶ್ ಕುಮಾರ್ ಅವರ ಪುತ್ರಿ ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.೮ನೇ ತರಗತಿಯ ವಿದ್ಯಾರ್ಥಿನಿಯಾದ ಇವರು ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಮೂಲಕ ಇವರು ರಾಷ್ಟೀಯ ಕ್ರೀಡಾಕೂಟದ ರಿಲೇ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
