Ad Widget

ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ : ಎಲ್ಲ ಇಲಾಖೆಗಳ ವರದಿ ಕೊಡಿ : ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರುವುದಾಗಿ ಶಾಸಕರ ಭರವಸೆ

ಸುಳ್ಯ ತಾಲೂಕಿನ ಬಹುತೇಕ ಸರಕಾರಿ ಇಲಾಖೆಗಳಲ್ಲಿ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆಯು ಕಂಡುಬAದಿದ್ದು, ಈ ಕುರಿತು ಅಧಿಕಾರಿಗಳು ಹೇಳಿಕೊಂಡಾಗ ಇಲಾಖೆಗಳಲ್ಲಿನ ಸಿಬ್ಬಂದಿಗಳ ಕೊರತೆಯ ಕುರಿತು ವರದಿ ನೀಡಿ, ಅದನ್ನು ಸದನದಲ್ಲಿ ಪ್ರಸ್ತಾಪಿಸುವೆ ಎಂದು ಶಾಸಕರು ಹೇಳಿದ್ದಾರೆ.ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಳ್ಳಾರೆ, ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ವರ್ಗಾವಣೆಯಾಗಿದ್ದು, ಗುತ್ತಿಗಾರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಉನ್ನತ ವ್ಯಾಸಂಗಕ್ಕೆ ತೆರಳಲು ಬಿಡುಗಡೆಯಾಗಿದ್ದಾರೆ ಎಂದು ನೀಡಿದರು. ವೈದ್ಯರ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ವೈದ್ಯರ ನೇಮಕಕ್ಕೆ ಮತ್ತೊಮ್ಮೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಶಾಸಕಿ ಭಾಗೀರಥಿ ತಿಳಿಸಿದರು. ಮೆಸ್ಕಾಂನಲ್ಲಿ ಲೈನ್‌ಮೆನ್, ಸಿಬ್ಬಂದಿಗಳ ಕೊರತೆ ಬಗ್ಗೆ, ಪಶು ವೈದ್ಯಕೀಯ ಇಲಾಖೆ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳಲ್ಲಿ ಅಧಿಕಾರಿ, ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇರುವ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ಬಗ್ಗೆ ಪಟ್ಟಿ ನೀಡಲು ಶಾಸಕರು ಸೂಚಿಸಿದರು. ಈ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರುವುದಾಗಿ ಶಾಸಕರು ಹೇಳಿದರು.ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿಬೇಕು ಎಂದು ಶಾಸಕರು ಸೂಚನೆ ನೀಡಿದರು. ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ನೀಡಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನಿರ್ದೇಶನ ನೀಡಿದರು. ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ರಹಿತ ಮನೆಗಳನ್ನು ಗುರುತಿಸಿ ವಿದ್ಯುತ್ತೀಕರಣ ಮಾಡಲು ಸಭೆಯಲ್ಲಿ ನಿರ್ಣಯ ಮಾಡಲಾಯಿತು. ಈ ಮನೆಗಳನ್ನು ಯಾವುದಾದರೂ ಯೋಜನೆಯಲ್ಲಿ ಸೇರಿಸಿ ವಿದ್ಯುತ್ ಒದಗಿಸಲು ಸರಕಾರದ ಗಮನಕ್ಕೆ ತರಲಾಗುವುದು.. ಅಡಿಕೆ ಹಳದಿ ರೋಗ ಬಾದಿತ ಪ್ರದೇಶಗಳಲ್ಲಿ ಪರ್ಯಾಯ ಕೃಷಿ ಬೆಳೆಸಲು ಪೂರಕ ವ್ಯವಸ್ಥೆ, ಸಹಕಾರ ನೀಡಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಸುಳ್ಯ ತಾಲೂಕಿನಲ್ಲಿ ಹೊಸತಾಗಿ ೪೩ ಶಿಕ್ಷಕರ ನೇಮಕ ಆದೇಶ ಆಗಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆಯ ಭಾಗವಾಗಿ ಶಾಲೆಗಳಲ್ಲಿ ವಿಶೇಷ ತರಗತಿ, ಮೋಟಿವೇಷನ್ ಕ್ಲಾಸ್‌ಗಳು ನಡೆಯುತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಗೆ ತಿಳಿಸಿದರು. ಎಲ್ಲಾ ಇಲಾಖೆಗಳು ಬಂದಿರುವ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ ವಹಿಸಿ ಎಂದು ಶಾಸಕರು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಶೀಲ್ದಾರ್ ಜಿ.ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!