- Thursday
- November 21st, 2024
ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ವಿದ್ಯಮಾತಾ ಶಾಖೆಗೆ ರಾಜ್ಯದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಡ್ಡೆ ಭಾಗವಹಿಸಲಿದ್ದಾರೆ ಎಂದು ಪಿ ಆರ್ ಒ ಚಂದ್ರಾವತಿ ಬಡ್ಡಡ್ಕ ತಿಳಿಸಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅವರ ಜೊತೆಗೆ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು , ಪದ್ಮಶ್ರೀ ಗಿರೀಶ್ ಭಾರಧ್ವಜ್ ಅಲ್ಲದೇ ಆಡಳಿತ ನಿರ್ದೇಶಕರಾದ...
ಸುಳ್ಯ: ನವಂಬರ್ 1, 2 ,ಮತ್ತು 3ರಂದು ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ನ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿ ಸಮಗ್ರ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕೆವಿಜಿ ಪಾಲಿಟೆಕ್ನಿಕ್ ನ ಕಬ್ಬಡಿ ತಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ ವೈಯಕ್ತಿಕ ವಿಭಾಗಗಳಲ್ಲಿ ಅಟೋಮೊಬೈಲ್ ವಿಭಾಗದ...
ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ "ಸ್ಪೇಸ್ ಆನ್ ವ್ಹೀಲ್" ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4...
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಕುಸಿತಗೊಂಡ ಘಟನೆ ನಡೆದಿದೆ. ಸಮತಟ್ಟುಗೊಳಿಸಿ ಇಂಟರ್ ಲಾಕ್ ಹಾಕಿದ ಜಾಗ ಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಕುಟುಂಬ ಸಮೇತ ಬಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿದ್ದಾರೆ ನ.1 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಅವರು, ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ. ಆಶ್ಲೇಷ ಬಲಿ ಪೂಜೆ, ಮಹಾಭಿಷೇಕ, ನಾಗ ಪ್ರತಿಷ್ಠೆ ಸೇವೆ ಮಾಡಿಸಿದ್ದಾರೆ. ಡಿ.ವಿ ಯವರ ಪತ್ನಿ ದಾಟಿ, ಮಗ...
ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಾವರ ಹಾಗೂ ಇತರೆ ಸಂಘ ಸಂಸ್ಥೆಗಳ ಸಹೋಗಯೊಂದಿಗೆ ಅಜ್ಜಾವರ ಶ್ರೀ ಮಹೀಶ ಮರ್ಧಿನಿ ದೇವಾಲದ ಬಳಿಯಲ್ಲಿ ಜರುಗುತ್ತಿರುವ 1753 ನೇ ಮದ್ಯವರ್ಜನ...
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...
ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ...
ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ. 1ರಂದು ಸ.ಹಿ.ಪ್ರಾ.ಶಾಲೆ ಪಂಬೆತ್ತಾಡಿಯಲ್ಲಿ ನಡೆಯಿತು. ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದಿಲೀಪ್ ಬಾಬ್ಲುಬೆಟ್ಟು...
Loading posts...
All posts loaded
No more posts