ಲಗೋರಿ ಅಸೋಸಿಯೇಶನ್ ನೇತೃತ್ವದಲ್ಲಿ ಸುಳ್ಯದಲ್ಲಿ ರಾಷ್ಟ್ರೀಯ ಲಗೋರಿ ಪಂದ್ಯಾಟ 2024 ರ ಫೆ.10 ಮತ್ತು 11 ರಂದು ಸುಳ್ಯದಲ್ಲಿ ನಡೆಯಲಿದ್ದು, ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯು ನ.30 ರಂದು ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಎನ್. ಜಯಪ್ರಕಾಶ್ ರೈ, ರಾಜ್ಯ ಲಗೋರಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕೆ.ಟಿ.ರವಿ, ಕೋಶಾಧಿಕಾರಿ ಬಿ.ಕೆಮಾಧವ, ಜಿಲ್ಲಾ ಲಗೋರಿ ಅಧ್ಯಕ್ಷ ಶಿವರಾಮ ಏನೆಕಲ್ಲು ವೇದಿಕೆಯಲ್ಲಿದ್ದರು.ಲಗೋರಿ ಪಂದ್ಯಾಟ ಸುಳ್ಯದಲ್ಲಿ 2024 ರ ಫೆಬ್ರವರಿ 10 ಮತ್ತು11 ರಂದು ನಡೆಸುವ ಕುರಿತು ನಿರ್ಣಯಕೈಗೊಳ್ಳಲಾಯಿತು. ಕಾರ್ಯಕ್ರಮ ಯಶಸ್ಸಿಗೆ ಸ್ವಾಗತ ಸಮಿತಿ ಹಾಗೂ ಸಂಘಟನಾ ಸಮಿತಿ ರಚನೆ ಮಾಡಲಾಯಿತು.ರಾಜ್ಯ ಲಗೋರಿ ಅಸೋಸಿಯೇಷನ್ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮ ಆಯೋಜನೆ, ರೂಪುರೇಷೆ ಕುರಿತು ವಿವರ ನೀಡಿದರು.
- Thursday
- November 21st, 2024