
ವರದಿ : ಉಲ್ಲಾಸ್ ಕಜ್ಜೋಡಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, “ಅರಿವು ಕೇಂದ್ರ” ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಡಿಸೆಂಬರ್ 08 ಶುಕ್ರವಾರದಂದು ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಪ.ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇತನರಿಗೆ ಸ್ಪರ್ಧಾ ಕಾರ್ಯಕ್ರಮ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಾಜಿ ಡಿ.ಡಿ.ಆರ್.ಸಿ ನೋಡೆಲ್ ಅಧಿಕಾರಿ ಪಿ.ವಿ ಸುಬ್ರಮಣಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಂಗಳೂರು ಯೋಜನಾ ನಿರ್ದೇಶಕರಾದ ಜಯರಾಮ್.ಕೆ.ಇ, ತಾಲೂಕು ಪಂಚಾಯತ್ ಇ.ಓ ರಾಜಣ್ಣ, ಸುಳ್ಯ ತಾಲೂಕು ಆಡಳಿತ ವೈದ್ಯಾಧಿಕಾರಿಗಳಾದ ಡಾ| ನಂದಕುಮಾರ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿಇಓ, ಸಿಡಿಪಿಓ ಶ್ರೀಮತಿ ಶೈಲಜಾ ಇವರುಗಳು ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತರಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಹಾಗೂ ಸರ್ವಸದಸ್ಯರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ, ಸುಳ್ಯ ಯಂ.ಆರ್.ಡಬ್ಲ್ಯೂ ಚಂದ್ರಶೇಖರ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಜಯನಗರ, ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಜಯರಾಮ್ ಕಡ್ಲಾರು, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಪ್ರಶಾಂತ್ ಕೋಡಿಬೈಲು, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ವೇದಾ ಶಿವರಾಮ್ ಏನೆಕಲ್ಲು, ಗುತ್ತಿಗಾರು ಗ್ರಾಮ ಪಂಚಾಯತ್ ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ಉಪಸ್ಥಿತರಿರಲಿದ್ದಾರೆ.