Ad Widget

ಮಡಪ್ಪಾಡಿ : ಡಿ.12 ರಂದು ಅಡಿಕೆ ಮತ್ತು ಅಡಿಕೆಯಲ್ಲಿ ಪರ್ಯಾಯ ಕೃಷಿ ಬಗ್ಗೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮಡಪ್ಪಾಡಿ ಇದರ ಸಹಯೋಗದೊಂದಿಗೆ ಡಿ.12 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 4:00 ಗಂಟೆಯವರೆಗೆ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಅಡಿಕೆ ಮತ್ತು ಅಡಿಕೆಯಲ್ಲಿ ಪರ್ಯಾಯ ಕೃಷಿ ಬಗ್ಗೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ ನಡೆಯಲಿದೆ.ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ತೋಟಗಾರಿಕೆ ಉಪ ನಿರ್ದೇಶಕರಾದ ಹೆಚ್.ಆರ್ ನಾಯಕ್, ರೈತ ಉತ್ಪಾದಕ ಕಂಪನಿ ಸುಳ್ಯ ಇದರ ಅಧ್ಯಕ್ಷರಾದ ವೀರಪ್ಪ ಗೌಡ ಇವರುಗಳು ಉಪಸ್ಥಿತರಿರಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕಾಸರಗೋಡು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ಕೆ.ವಿ.ಕೆ ಮಂಗಳೂರು ವಿಜ್ಞಾನಿಗಳು ಹಾಗೂ ಪ್ರಗತಿಪರ ರಂಬೂಟನ್ ಕೃಷಿಕರಾದ ಚೇತನ್ ಕುಮಾರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading