Ad Widget

ಗುತ್ತಿಗಾರು : ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ ಮತ್ತು ಅಭಿನಂದನಾ ಕಾರ್ಯಕ್ರಮ- ನಾಲ್ವರು ವಿಶೇಷ ಚೇತನ ಸಾಧಕರಿಗೆ “ದಿವ್ಯಾಂಗ ಸಾಧಕ ಪ್ರಶಸ್ತಿ”

(ವರದಿ : ಉಲ್ಲಾಸ್ ಕಜ್ಜೋಡಿ)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಲಯನ್ಸ್ ಕ್ಲಬ್ ಗುತ್ತಿಗಾರು, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಂಗನವಾಡಿ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಡಿ.08 ರಂದು ಸ್ಪರ್ಧಾ ಕಾರ್ಯಕ್ರಮ ಮತ್ತು ಅಭಿನಂದನಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಪ.ವರ್ಗದ ಸಭಾಭವನ ಗುತ್ತಿಗಾರು ಇಲ್ಲಿ ನಡೆಯಿತು.
ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರಾ ಮೂಕಮಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ತಾಲೂಕು ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಶ್ವೇತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಅವರುಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾರತಿ, ಗ್ರಾಮ ಪಂಚಾಯತ್ ಸದಸ್ಯರಾದ ಲತಾ ಅಜಡ್ಕ, ವಿನಯ್, ಜಗದೀಶ್ ಬಾಕಿಲ, ಪ್ರಮೀಳಾ ಭಾಸ್ಕರ ಎರ್ದಡ್ಕ, ಲೀಲಾವತಿ, ಶಾರದ, ಮಂಜುಳಾ ಮುತ್ಲಾಜೆ, ಅನಿತಾ ಮೆಟ್ಟಿನಡ್ಕ, ರೇವತಿ ಆಚಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಂತರ ವಿಶೇಷ ಚೇತನರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು. ಮಹಿಳೆಯರ ವಿಭಾಗ, ಪುರುಷರ ವಿಭಾಗ ಹಾಗೂ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಯಿತು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಾಜಿ ಡಿ.ಡಿ.ಆರ್.ಸಿ ನೋಡೆಲ್ ಅಧಿಕಾರಿ ಪಿ.ವಿ ಸುಬ್ರಮಣಿ ಅವರು ಉತ್ತಮ ಮಾಹಿತಿ ನೀಡಿ “ಗ್ರಾಮ ಮಟ್ಟದಲ್ಲಿ ಪ್ರಪ್ರಥಮವಾಗಿ ಈ ಒಂದು ಕಾರ್ಯಕ್ರಮ ನಡೆದಿರುವುದು ಶ್ಲಾಘನೀಯ, ದಿವ್ಯಾಂಗರ ಬಗ್ಗೆ ಅನುಕಂಪ ಬೇಡ ಅವರಿಗೆ ಅವಕಾಶ ನೀಡಿ” ಎಂದು ಪ್ರೋತ್ಸಾಹದ ಮಾತುಗಳನ್ನಾಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಂಚಾಯತ್ ಯೋಜನಾ ನಿರ್ದೇಶಕರಾದ ಜಯರಾಮ್.ಕೆ.ಇ ಮಾತನಾಡಿ “ಒಕ್ಕೂಟದಲ್ಲಿ 3 ವಿಶೇಷ ಚೇತನರ ಸ್ವಸಹಾಯ ಸಂಘಗಳು ರಚನೆಯಾಗಿದೆ. ಅವರಿಗೆ ಉತ್ತಮ ಸೌಲಭ್ಯ ದೊರಕುವಂತಾಗಬೇಕು” ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ವೈದ್ಯಾಧಿಕಾರಿ ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ ರಮೇಶ್, ಸಿಡಿಪಿಓ ಶ್ರೀಮತಿ ಶೈಲಜಾ ಅಭಿನಂದನಾ ಮಾತುಗಳನ್ನಾಡಿದರು.
ನಂತರ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳಲ್ಲಿ ಅಪ್ರತಿಮ ಸಾಧನೆಗೈದ ವಿಶೇಷ ಚೇತನ ಸಾಧಕರಿಗೆ “ದಿವ್ಯಾಂಗ ಸಾಧಕ ಪ್ರಶಸ್ತಿ” ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಾಗೂ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು.
ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಸಾಲ್ತಾಡಿ ಹಾಗೂ ಸರ್ವಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಶ್ರೀಮತಿ ಕಾವೇರಿ ಭರತ್, ಎಂ.ಆರ್.ಡಬ್ಲ್ಯೂ ಚಂದ್ರಶೇಖರ್, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಜಯನಗರ, ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಜಯರಾಮ್ ಕಡ್ಲಾರು, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಮಾಜಿ ಅಧ್ಯಕ್ಷರಾದ ಮಾಯಿಲಪ್ಪ ಸಂಕೇಶ, ಇನ್ನರ್ ವೀಲ್ ಕ್ಲಬ್ ನ ಪೂರ್ವಾಧ್ಯಕ್ಷರಾದ ಸರೋಜಿನಿ ಮಾಯಿಲಪ್ಪ, ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ಉಪಸ್ಥಿತರಿದ್ದರು.
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀಮತಿ ರವಿಕಲಾ ಚೆಮ್ನೂರು ಪ್ರಾರ್ಥಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಭಾರತಿ ಸ್ವಾಗತಿಸಿದರು. ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳ್ಳಕ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಲತಾ ಅಂಬೆಕಲ್ಲು ವಂದಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ ಅಭಿಲಾಷಾ ಶಿವಪ್ರಕಾಶ್ ಮೋಟ್ನೂರು ಕಾರ್ಯಕ್ರಮ ನಿರೂಪಿಸಿದರು. ಎಂ.ಬಿ.ಕೆ ಮಿತ್ರಕುಮಾರಿ ಚಿಕ್ಮುಳಿ, ಎಲ್.ಸಿ.ಆರ್.ಪಿ ದಿವ್ಯ ಹರೀಶ್ ಹಾಗೂ ಶಾರದಾ, ಪಶುಸಖಿ ಚೈತನ್ಯ, ಒಕ್ಕೂಟದ ಪದಾಧಿಕಾರಿಗಳು, ಶೋಭಿತಾ, ನಾಗವೇಣಿ, ಜಯಶ್ರೀ, ಜಯಲಕ್ಷ್ಮಿ ಬಳ್ಳಕ, ಮೋಹನಾಂಗಿ ಉದೇರಿ, ಗುತ್ತಿಗಾರು ಗ್ರಾಮ ಪಂಚಾಯತ್ ನ 9 ಅಂಗನವಾಡಿ ಕಾರ್ಯಕರ್ತೆಯರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಎಂ ನ ಟಿ.ಪಿ.ಎಮ್ ಶ್ವೇತಾ, ಅಂಗನವಾಡಿ ವಲಯ ಮೇಲ್ವಿಚಾರಕರಾದ ವಿಜಯ.ಜೆ.ಡಿ, ಶಿಕ್ಷಣ ಇಲಾಖೆಯ ನಳಿನಿ, ಇನ್ನರ್ ವೀಲ್ ನ ಚಂದ್ರಾವತಿ ಚಿದ್ಗಲ್, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ದಿನೇಶ್ ಹಾಲೆಮಜಲು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಘನತ್ಯಾಜ್ಯ ಘಟಕದ ಸಿಬ್ಬಂದಿಗಳು, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದ ವಿಶೇಷ ಚೇತನರು ಹಾಗೂ ಪೋಷಕರು, ಸಾರ್ವಜನಿಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಂಡಿತು.
ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಭೋಜನದ ವ್ಯವಸ್ಥೆಗೆ ಸಹಕರಿಸಿದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!