ದೇಶದಲ್ಲಿ ಭಾರಿ ಸದ್ದು ಮಾಡಿದ್ದ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿ ಮಾಡಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಗೆ ಸೇರಿದವರಾದ ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ, ನೆಕ್ಕಿಲಾಡಿ ಅಗ್ನಾಡಿ ನಿವಾಸಿ ಮಸೂದ್ ಅಗ್ನಾಡಿ, ಮಸೂದ್ ಕೆ.ಎ., ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಕೊಡಾಜೆ, ಸುಳ್ಯದ ಕಲ್ಲುಮುಟ್ಟು ನಿವಾಸಿ ಉಮ್ಮರ್ ಆರ್. ಉಮ್ಮರ್ ಫಾರೂಕ್, ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್ ನಲ್ಲಿರುವವರು ಎಂದು ತಿಳಿಸಿದ್ದಾರೆ.
ಈ ಆರೋಪಿಗಳು ಕಂಡುಬಂದಲ್ಲಿ ಅಥಾವ ಅವರ ಇರುವಿಕೆಯ ಕುರಿತಾಗಿ ಮಾಹಿತಿ (ವಾಟ್ಸ್ಆ್ಯಪ್ 9497715294) ಇದ್ದಲ್ಲಿ ನೀಡುವಂತೆ ಸಾರ್ವಜನಿಕರನ್ನು ಎನ್ ಐಎ ವಿನಂತಿಸಿದೆ. ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುವುದಾಗಿಯು ಅದು ತಿಳಿಸಿದೆ.