ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಡಿ.16 ಶನಿವಾರದಂದು ವಿಜಯ ದಿವಸ್ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರುವ ಕಟ್ಟ, ನಿವೃತ್ತ ಪ್ರಾಚಾರ್ಯರಾದ ಪ್ರಭಾಕರ ಕಿರಿಭಾಗ, ಶಾರೀರಿಕ ಶಿಕ್ಷಕರಾದ ಮೇದಪ್ಪ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಸ್ಥಾಪಕಾಧ್ಯಕ್ಷರಾದ ಲ| ಪ್ರೋ.ರಂಗಯ್ಯ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ನವೀನ್ ಕುಮಾರ್ ಹರಿಹರ ಪಲ್ಲತ್ತಡ್ಕ, ವೈ.ಪುಟ್ಟ ಹರಿಹರ ಪಲ್ಲತ್ತಡ್ಕ, ಧನಂಜಯ ಬಾಳುಗೋಡು, ಮೋಹನ್ ಕುಮಾರ್ ಬಾಳುಗೋಡು ಇವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಸನ್ಮಾನಿಸಿದರು. ಸನ್ಮಾನಿತರಾದ ನವೀನ್ ಕುಮಾರ್ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು. ಲಯನ್ಸ್ ಕಾರ್ಯದರ್ಶಿ ಲ| ಸತೀಶ್ ಕೂಜುಗೋಡು ಸ್ವಾಗತಿಸಿ ಲ| ಚಂದ್ರಶೇಖರ ಪಾನತ್ತಿಲ ವಂದನಾರ್ಪಣೆ ಮಾಡಿದರು. ಲ| ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.