Ad Widget

ಕುಮಾರ ಪರ್ವತ ಚಾರಣಿಗರ ನೆಚ್ಚಿನ ಗಿರಿಗದ್ದೆ ಭಟ್ರು ಇನ್ನಿಲ್ಲ

ಕುಮಾರ ಪರ್ವತ ಚಾರಣ ಮಾಡುವ ದಾರಿ ಮಧ್ಯೆ ಗಿರಿಗದ್ದೆ ಎಂಬಲ್ಲಿ ನೆಲೆಸಿದ್ದ ಮಹಾಲಿಂಗ ಭಟ್ಟರು ಸಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು . ಅವರಿಗೆ 67 ವರ್ಷ ವಯಸ್ಸಾಗಿತ್ತು. ಸುಬ್ರಹ್ಮಣ್ಯದಿಂದ 4 ಕಿಮೀ ದೂರದಲ್ಲಿ ದಾರಿ ಮಧ್ಯೆ ಸಿಗುವ ಮನೆಯೇ ಗಿರಿಗದ್ದೆ ಮಹಾಲಿಂಗ ಭಟ್ಟರದು. ಪ್ರವಾಸಿಗರಿಗೆ ಇಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಮಾಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರು.

. . . . . . . . .

ಕುಮಾರಪರ್ವತ ಚಾರಣಕ್ಕೆ ತೆರಳುವ ಹೆಚ್ಚಿನವರು ಇವರನ್ನು ಸಂಪರ್ಕಿಸಿಯೇ ಆಗಮಿಸುತ್ತಿದ್ದರು. ಮಹಾಲಿಂಗ ಭಟ್ ಅವರ ಮನೆಗೆ ಆಹಾರ ಸಾಮಾಗ್ರಿಗಳನ್ನು ಹಾಗೂ ಮತ್ತಿತರ ಸಾಮಾಗ್ರಿಗಳನ್ನು ಹೊತ್ತುಕೊಂಡೇ ಸಾಗಬೇಕಾಗಿತ್ತು. ಮಹಾಲಿಂಗ ಭಟ್ ಅವರು ಗಿರಿಗದ್ದೆಯಲ್ಲಿ ಕೃಷಿ ಕೆಲಸ ನಿರ್ವಹಿಸುತ್ತಿದ್ದರು.

. . . . . . .

ಮೃತರು ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading