

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನಿನ್ನೆ ತಡರಾತ್ರಿ ಕತ್ತಿಯಲ್ಲಿ ಕಡಿದು ಓರ್ವ ವ್ಯಕ್ತಿಯು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇತ್ತ ರಾಮಣ್ಣ ನಾಯ್ಕ ಮತ್ತು ಅವರ ಪತ್ನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೆ ಕುಸಿದು ಬಿದ್ದಿದ್ದರು ಎಂದು ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತು ಸ್ಥಳೀಯ ಜನತೆ ಸರಕಾರಿ ಆಸ್ಪತ್ರೆಗೆ ಮಾಹಿತಿ ರವಾನಿಸಿದ ಹಿನ್ನಲೆಯಲ್ಲಿ ಇದೀಗ ಆ್ಯಂಬುಲೆನ್ಸ್ ಬಂದು ಈರ್ವರನ್ನು ಮನೆಯಿಂದ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.