Ad Widget

ಸರಕಾರಿ ಪ್ರೌಢ ಶಾಲೆ ಎಣ್ಮೂರು:ಉಚಿತ ಮರುಬಳಕೆಯ ಪ್ಯಾಡ್ ವಿತರಣೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಮುಟ್ಟು ಗುಟ್ಟಲ್ಲ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ Karnataka seaferers trust ವತಿಯಿಂದ ನೀಡಲಾದ ಉಚಿತ ಮರುಬಳಕೆಯ ಪ್ಯಾಡ್ ನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತ ಸುವರ್ಣರವರು ವಹಿಸಿದ್ದರು. ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾl ವೀಣಾ ಅವರು ಹೆಣ್ಣುಮಕ್ಕಳ ಹದಿಹರೆಯದ ಸಮಸ್ಯೆಗಳು ಹಾಗೂ ಋತುಚಕ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಶ್ರೀಮತಿ ನೇತ್ರಾವತಿ ಮತ್ತು ಧನ್ಯ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಜಲಜಾಕ್ಷಿ ಸ.ಹಿ.ಪ್ರಾ .ಶಾಲೆ ಕೋಲ್ಚಾರು ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಉಷ.ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಕವಿತ ರವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading