Ad Widget

ಸುಬ್ರಹ್ಮಣ್ಯ : 24*7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ

ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುವಂತಹ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ 24*7 ಆಸ್ಪತ್ರೆ ಸೇವೆಗಾಗಿ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ| ರವಿ ಕಕ್ಕೆಪದವು ಮನವಿ ಸಲ್ಲಿಸಿದರು. ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಇಲ್ಲಿನ ಈಗಿನ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರಿಸಿ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು ಅಗತ್ಯ ಆರೋಗ್ಯ ಸೇವೆಗಾಗಿ ಕಷ್ಟ ಪಡುವಂತಹ ಪರಿಸ್ಥಿತಿಯನ್ನು ವಿವರಿಸಿದ ರವಿ ಕಕ್ಕೆಪದವು ಸುಸಜ್ಜಿತ ಆಸ್ಪತ್ರೆಯ ಅಗತ್ಯತೆಯನ್ನು ತಿಳಿಸಿ ರಮೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿದ ರಮೇಶ್ ಕುಮಾರ್ ಅವರು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾಧವ ದೇವರಗದ್ದೆ ಉಪಸ್ಥಿತರಿದ್ದರು.

. . . . . . . . .

(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading