
ವಳಲಂಬೆ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಹಾಗೂ ಜನಪದ ವೈಭವದ ಪ್ರಯುಕ್ತ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮ ಡಿ.24 ರಂದು ನಡೆಯಿತು. ಶ್ರಮದಾನದಲ್ಲಿ ಅಂಗನವಾಡಿ ಹಾಗೂ ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಎನ್.ಎಸ್.ಎಸ್. ಸೇವಾ ಸಂಗಮದ ಸದಸ್ಯರು, ಶಿಕ್ಷಕರು ಹಾಗೂ ವಿವಿಧ ಸಂಘದ ಸದಸ್ಯರು ಭಾಗವಹಿಸಿದ್ದರು.