Ad Widget

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ.

ಉಬರಡ್ಕ ಮಿತ್ತೂರು ಗ್ರಾಮದ ಭರ್ಜರಿಗುಂಡಿ ಬಾಬು ನಾಯ್ಕರವರ ಪುತ್ರ ಸತೀಶ್ ರವರು ಮನೆಯ ಪಕ್ಕದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಡಿ.10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಗುತ್ತಿಗಾರು : ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ ಮತ್ತು ಅಭಿನಂದನಾ ಕಾರ್ಯಕ್ರಮ- ನಾಲ್ವರು ವಿಶೇಷ ಚೇತನ ಸಾಧಕರಿಗೆ “ದಿವ್ಯಾಂಗ ಸಾಧಕ ಪ್ರಶಸ್ತಿ”

(ವರದಿ : ಉಲ್ಲಾಸ್ ಕಜ್ಜೋಡಿ)ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ,...
Ad Widget

ಕರ್ಲಪ್ಪಾಡಿ‌ ಜಾತ್ರೆ ಪ್ರಯುಕ್ತ ಶ್ರೀ‌ವಿಷ್ಣು ಯುವಕ ಮಂಡಲದಿಂದ ಶ್ರಮದಾನ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಕ್ಷೇತ್ರದ ಜಾತ್ರೋತ್ಸವದ ಪೂರ್ವ ತಯಾರಿಯಾಗಿ ಶ್ರೀ ವಿಷ್ಣು ಯುವಕ ಮಂಡಲ ಮೇನಾಲ ವತಿಯಿಂದ ಶ್ರಮದಾನ ಸೇವೆ ನಡೆಯಿತು. ಈ ಶ್ರಮದಾನ ಸೇವೆಯಲ್ಲಿ ವಿಷ್ಣು ಯುವಕ ಮಂಡಲದ ಅಧ್ಯಕ್ಷ ರಂಜಿತ್ ರೈ ಮೇನಾಲ,ಗೌರವ ಅಧ್ಯಕ್ಷ ಶ್ರೀಧರ ಮನಣಿಯಾನಿ ಮೇನಾಲ,ಪ್ರಧಾನ ಕಾರ್ಯದರ್ಶಿ ಮೋಹನ್ ಮೂಲ್ಯಯುವಕ ಮಂಡಲದ ಪದಾಧಿಕಾರಿಗಳಾದ ಶರಣ್ಯ ರಾವ್ ತುದಿಯಡ್ಕ, ಉಮೇಶ್ ಇರಂತಮಜಲು,...

ಡಿ.12 : ವಳಲಂಬೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಡಿ.12 ರಂದು ಸಂಜೆ ಗಂಟೆ 6.30 ರಿಂದ ಚಿನ್ನಮ್ಮ ವಳಲಂಬೆ ಮತ್ತು ಮಕ್ಕಳ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವಾರೂಪದಲ್ಲಿ ಪ್ರದರ್ಶನಗೊಳ್ಳಲಿದೆ.

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.17 ರಿಂದ ಧನುಪೂಜೆ ಆರಂಭ

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ 17-12-2023ನೇ ಆದಿತ್ಯವಾರದಿಂದ 14-01-2024ನೇ ಆದಿತ್ಯವಾರದ ತನಕ ಪ್ರತಿದಿನ ಪ್ರಾತಃಕಾಲ 05:30 ಕ್ಕೆ ಧನುಪೂಜೆ ನಡೆಯಲಿದ್ದು, 14-01-2024ನೇ ಆದಿತ್ಯವಾರದಂದು ಮಕರಸಂಕ್ರಮಣ, ಬೆಳಿಗ್ಗೆ 4:00 ಗಂಟೆಯಿಂದ ಉಧ್ಯಾಪನಾ ಧನುಪೂಜೆ, ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ನಡೆಯಲಿದೆ.

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಡಿ.16 ರಂದು ತಾಲೂಕಿನ 26 ಶಾಲೆಗಳಲ್ಲಿ ಏಕಕಾಲದಲ್ಲಿ ಕೆ.ವಿ.ಜಿ. ಸಾಧನೆ – ಸಂಸ್ಮರಣೆ

ಆಧುನಿಕ ಸುಳ್ಯದ ಅಮರ ಶಿಲ್ಪಿ ಡಾ| ಕುರುಂಜಿ ವೆಂಕಟ್ರಮಣ ಗೌಡರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಶಾಲಾ ಕಾಲೇಜುಗಳಲ್ಲಿ ವಿನೂತನ ಕಾರ್ಯಕ್ರಮ ಕೆ.ವಿ.ಜಿ. ಸಾಧನೆ – ಸಂಸ್ಮರಣೆ ಹಾಗೂ ಶಾಲೆಗಳ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಹಾಗೂ ಭಾಷಣ ಸ್ಪರ್ಧೆಯು ಡಿ.೧೬ರಂದು ನಡೆಯಲಿದೆ. ತಾಲೂಕಿನಲ್ಲಿ ೨೬...

ಕರ್ನಾಟಕ ಲೋಕಾಯುಕ್ತ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ...

ಶ್ರೀ ಶಾರದಾ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಂಭ್ರಮ, ಸನ್ಮಾನ

ಶ್ರೀ ಶಾರದಾ ಹೆಣ್ಮಕ್ಕಳ ಪ್ರೌಢ ಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಅಮೃತ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕಿನ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ಉತ್ತಮ ಪ್ರಾಂಶುಪಾಲರ ಪ್ರಶಸ್ತಿ ವಿಜೇತ ರಾದ ಗಂಗಾಧರ ಆಳ್ವ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಗೌಡ ವಿದ್ಯಾ ಸಂಘದ...

ಡಿ.17ರಂದು ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್ ರವರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆ, ಸನ್ಮಾನ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸುಳ್ಯ ತಾಲೂಕು ಸಮಿತಿಯಿಂದ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಡಿ.17ರಂದು ಡಾ| ಬಿ.ಆರ್.ಅಂಬೇಡ್ಕರ್ ರವರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆಯು ಪಂಜ ಗ್ರಾ.ಪಂ. ಸಭಾಭವನದಲ್ಲಿ ನಡೆಯಲಿದೆ ಎಂದು ತಿಳಿಸಿದರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ "ಸಂವಿಧಾನ ಶಿಲ್ಪಿ, ಭಾರತರತ್ನ ಡಾ| ಬಿ.ಆರ್.ಅಂಬೇಡ್ಕರ್...

ಡಿ 31 ರಂದು ನಡೆಯಲಿರುವ ಸುಳ್ಯ ತಾ ಬಂಟರ ಸಮಾವೇಶದ ಆಮಂತ್ರಣ ಬಿಡುಗಡೆ.

ಸುಳ್ಯ ತಾಲೂಕು ಬಂಟರ ಸಮಾವೇಶ ಡಿ 31 ರಂದು ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಲಿದ್ದು ಆಮಂತ್ರಣವನ್ನು ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರು ಬಿಡುಗಡೆಗೊಳಿಸಿ ಕಾರ್ಯಕ್ರಮ ದ ವಿವರ ನೀಡಿ ಎಲ್ಲಾ ಸದಸ್ಯರು ಸಕ್ರಿಯರಾಗಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದರು. ವೇದಿಕೆಯಲ್ಲಿ ಬಂಟರ ಸಂಘದ ಪ್ರಧಾನಕಾರ್ಯದರ್ಶಿ ಶುಭಾಸಚಂದ್ರ ರೈ, ಖಜಾಂಜಿ ಗಂಗಾಧರ ರೈ, ಆರಂತೋಡು ವಲಯಾ ಧ್ಯಕ್ಷ...
Loading posts...

All posts loaded

No more posts

error: Content is protected !!