ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲಾ ವಾರ್ಷಿಕೋತ್ಸವ – ಸನ್ಮಾನ

ಹಿರಿಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿಗಳ ಪೋಷಕರು, ಊರ ವಿದ್ಯಾಭಿಮಾನಿಗಳ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಶಾಲೆಯ ವಾರ್ಷಿಕೋತ್ಸವವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಅಶ್ವಥ್.ವೈ.ಯು, ತಾಲೂಕು ಪಂಚಾಯತ್ ಸದಸ್ಯರಾದ ತಾರಾ ಮಲ್ಲಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಳ್ಯ ಯೋಜನಾಧಿಕಾರಿಗಳಾದ ನಾಗೇಶ್.ಪಿ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಹರ್ಷಕುಮಾರ್.ಡಿ.ಎಸ್, ಪ್ರಗತಿಪರ ಕೃಷಿಕರಾದ ಭವಾನಿಶಂಕರ ಪಿಂಡಿಮನೆ, ಸಮೂಹ ಸಂಪನ್ಮೂಲ ಕೇಂದ್ರ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ.ಟಿ, ನಿವೃತ್ತ ಮುಖ್ಯ ಶಿಕ್ಷಕರಾದ ಬೊಳಿಯಮ್ಮ ಚಾಂತಾಳ, ಬ್ಲೂಮ್ ಎನರ್ಜಿ ಕಂಪನಿ ಬೆಂಗಳೂರು ಲಕ್ಷ್ಮೀಶ ಶಿರೂರು, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಗುಬ್ಬಿಗ ಸ.ಹಿ.ಪ್ರಾ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕರಾದ ಸುಭಾಷ್.ಎಸ್, ಸ.ಪ.ಪೂ ಕಾಲೇಜು ಗುತ್ತಿಗಾರು ದೈಹಿಕ ಶಿಕ್ಷಕರಾದ ಗೋಪಾಲ್.ಎಂ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕರಿಗೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ, ಪೋಷಕರಿಂದ ಹಾಗೂ ಊರವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಾಲಸುಬ್ರಮಣ್ಯ.ಎನ್.ಜಿ, ಶಾಲಾ ಮುಖ್ಯ ಶಿಕ್ಷಕರಾದ ಕಮಲ.ಎ ಹಾಗೂ ವಿದ್ಯಾರ್ಥಿಗಳು, ಪೋಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದವರು ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಊರಿನ ವಿದ್ಯಾಭಿಮಾನಿಗಳು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading