ಅಡ್ತಲೆ : ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿಗೆ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಶಾಸಕರಿಗೆ ಮನವಿ


ಅಗಲೀಕರಣ ಗೊಂಡ ಅರಂತೋಡು ಅಡ್ತಲೆ ರಸ್ತೆಯ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬ, ಮರಗಳನ್ನು ತೆಗೆಯಲು, ಬಾಕಿ ಉಳಿದಿರುವ ಎರಡನೇ ಕೋಟ್ ಡಾಮರೀಕರಣ ಹಾಗೂ ಪಿಂಡಿಮನೆಯಿಂದ ಅಡ್ತಲೆ ತನಕ ಅಗಲೀಕರಣ ಗೊಳ್ಳಲು ಬಾಕಿ ಇರುವ ರಸ್ತೆಯನ್ನು ಅತೀ ಶೀಘ್ರದಲ್ಲಿ ಸೂಕ್ತ ಅನುದಾನ ಒದಗಿಸಿಕೊಡಲು ಶಾಸಕರಾದ ಭಾಗೀರಥಿ ಮುರುಳ್ಯ ಅವರಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಮನವಿ ಮಾಡಲಾಯಿತು. ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಹಾಗೂ ಕಾರ್ಯದರ್ಶಿ ರಂಜಿತ್ ಅಡ್ತಲೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು ಹಾಗೂ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರನ್ನು ಸ್ಥಳಕ್ಕೆ ಕರೆಯಿಸಿ, ಜನವರಿ 15 ರ ಒಳಗೆ ಎರಡನೇ ಕೋಟ್ ಡಾಮರೀಕರಣ ಪ್ರಾರಂಭ ಮಾಡಲು ಹಾಗೂ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಮಾಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪಿಂಡಿಮನೆಯಿಂದ ಅಡ್ತಲೆ ತನಕ ರಸ್ತೆಯನ್ನು ಅಗಲೀಕರಣಗೊಳಿಸಲು ಆದಷ್ಟು ಬೇಗ ಸೂಕ್ತ ಅನುದಾನ ನೀಡಲು ಪ್ರಯತ್ನ ಮಾಡುತ್ತೇವೆ ಎಂಬುದಾಗಿ ಭರವಸೆ ನೀಡಿದರು.ಈ ಸಂದರ್ಭ ಬಿ ಜೆ ಪಿ ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading