
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅಶೋಕ ಎಂಬ ಯುವಕ ಅರಂತೋಡು ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಅವರು ಡಿ.28 ರ ಗುರುವಾರದಂದು ವಿಷ ಸೇವಿಸಿ ರಾತ್ರಿ 12 ಗಂಟೆಗೆ ಮನೆಯ ಬಳಿಗೆ ಬಂದಿದ್ದರು. ಇದನ್ನು ಗಮನಿಸಿದ ಮನೆಯವರು ಮತ್ತು ಸಂಬಂಧಿಕರು ತಕ್ಷಣವೇ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ವೈಧ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಆದರೆ ಅಲ್ಲಿಂದ ಸುರತ್ಕಲ್ ನಲ್ಲಿರುವ ಮುಕ್ಕಾ ಶ್ರೀನಿವಾಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ನಿನ್ನೆ ತಡ ರಾತ್ರಿ ಚಿಕಿತ್ಸೆ ಫಲಿಸದೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇವರ ಸಹೋದರ ಅಯ್ಯಪ್ಪ ಮಾಲಾಧಾರಿಯಾಗಿದ್ದು ಇವರು ಪಾದಯಾತ್ರೆ ಮೂಲಕ ಸನ್ನಿಧಾನಕ್ಕೆ ತೆರಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೃತ ಯುವಕ ತಾಯಿ ಹಾಗೂ ಸಹೋದರ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.