ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ ಬಿ, ಪಿ.ಜಗನ್ನಾಥ ರೈ, ಯಶೋಧ ಎ.ಎಸ್. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಉಮೇಶ್ ಕೆ.ಎಂ.ಬಿ, ನಿರಂಜನ ಶೆಟ್ಟಿ ಪಾಲ್ತಾಡು, ಗ್ರಾ.ಪಂ.ಸದಸ್ಯ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ, ಅಮರನಾಥ ಶೆಟ್ಟಿ ಪೆರುವಾಜೆಗುತ್ತು, ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ವಿಜಯ ಆಚಾರ್ಯ, ಪ್ರೀತಂ ರೈ, ವಿಠಲ ಶೆಟ್ಟಿ, ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.