
ಅನಾರೋಗ್ಯಕ್ಕೊಳಗಾಗಿ ವಿದ್ಯಾರ್ಥಿನಿ ಮೃತ ಪಟ್ಟ ಘಟನೆ ಎಡಮಂಗಲದಿಂದ ವರದಿಯಾಗಿದೆ. 11 ರಂದು ಅನಾರೋಗ್ಯಕ್ಕೊಳಗಾದ ವಿದ್ಯಾರ್ಥಿಯನ್ನು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಈಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪದವಿ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ. ಈಕೆ ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ಇವರ ಪುತ್ರಿ.