ರಾಜ್ಯದಲ್ಲಿ ಸರಕಾರಿ ಶಾಲೆ, ಅನುದಾನಿತ ಶಾಲೆ ಎಂಬ ತಾರತಮ್ಯ ಬದಲಾಗಬೇಕಾಗಿದೆ. ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸಮಾನವಾದ ರೀತಿಯ ಅನುದಾನ, ಸೌಕರ್ಯ ಹಂಚಿಕೆಯಾಗಬೇಕು. ಇದಕ್ಕಾಗಿ ಸರಕಾರಿ ಮಟ್ಟದಲ್ಲಿ ಪ್ರಯತ್ನ ನಡೆಸಬೇಕಾಗಿದೆ.ಈ ಹಿನ್ನಲೆಯಲ್ಲಿ ಸರಕಾರದ ಹಿಂದಿನಿಂದಲು ಗಮನ ಸೆಳೆಯುತ್ತ ಬಂದಿದ್ದೆನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮೂರು ದಿನಗಳ ಕಾಲ ನಡೆಯುವ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ. ರಾಜ್ಯದಲ್ಲಿ48 ಸಾವಿರ ಸರಕಾರಿ ಶಾಲೆಗಳು ಮತ್ತು
2 ಸಾವಿರಕ್ಕೂ ಅಧಿಕ ಅನುದಾನಿತ ಶಾಲೆಗಳಿವೆ. ಸುಮಾರು 25 ಸಾವಿರ ಕೋಟಿಯನ್ನು ಶಿಕ್ಷಣಕ್ಕಾಗಿ ವ್ಯಯಿಸಲಾಗುತಿದೆ. ಇದು ಎಲ್ಲಾ ಸರಕಾರಿ, ಅನುದಾನಿತ ಶಾಲೆಗೆ ಸಮಾನಾಗಿ ಹಂಚಿಕೆಯಾಗಬೇಕು ಎಂದು ಅವರು ಹೇಳಿದರು. ಶಿಕ್ಷಣದ ಗುಣಮಟ್ಟದ ಬಗ್ಗೆ ಬಹಳ ದೊಡ್ಡ ಚರ್ಚೆ ನಡೆಯುತ್ತಿದ್ದರೂ ಅದಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಲು ಸಾಧ್ಯವಾಗಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಕಗಳ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದು ಎಂದು ನಾವು ಭಾವಿಸಿದ್ದೇವೆ ಎಂದ ಅವರು ಶ್ರೇಷ್ಠ ಪ್ರಜೆ ಹಾಗೂ ರಾಷ್ಟ್ರ ಭಕ್ತರನ್ನು ಸೃಷ್ಠಿಸುವ ಶಿಕ್ಷಣ ಬೇಕಾಗಿದೆ ಎಂದು ಅವರು ಹೇಳಿದರು.
ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮಾತನಾಡುತ್ತಾ ‘ದೀಪದ ಬೆಳಕು ಹರಡಿದಂತೆ ಈ ಶಾಲೆಯ ಶಿಕ್ಷಣ, ಜ್ಞಾನ ಇಡೀ ಊರಿಗೆ ಹಂಚಿ ಹೋಗಿದೆ. ಈ ಶಾಲೆಯ ಉಳಿವಿಗೆ, ಊರಿನ ಜನರ ಪ್ರಯತ್ನ ಬೇಕಾಗಿದೆ ಜೊತೆಗೆ ಆತ್ಮಾವಲೋಕನ ಮಾಡಬೇಕಾಗಿದೆ ಎಂದರು.
‘ಸುವರ್ಣ ಜ್ಯೋತಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇ ಗೌಡ ಮಾತನಾಡುತ್ತಾ
ಪಠ್ಯ ಪುಸ್ತಕ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲದು ,ಕಾಲ ಕಾಲಕ್ಕೆ ಸೂಕ್ತವಾದ ಸಮಗ್ರ ಶಿಕ್ಷಣ, ಸಂಸ್ಕಾರ ನೀಡುವ ಪಠ್ಯ ಪುಸ್ತಕ ಬೇಕಾಗಿದೆ ಎಂದು ಹೇಳಿದರು ಪಠ್ಯ ಪುಸ್ತಕ ರಚನೆಯಲ್ಲಿ ರಾಜಕಾರಣಿಗಳು ಕೈ ಹಾಕಬಾರದು ಅದನ್ನು ತಯಾರು ಮಾಡಲು ಹಿರಿಯರು ಶಿಕ್ಷಣ ತಜ್ಞರು ಮಾಡುವ ಕೆಲಸವಾಗಿದೆ ಎಂದು ಹೇಳಿದರು. ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ನಾಡನ್ನು ಕಟ್ಟುವ, ಒಡೆದ ಮನಸ್ಸನ್ನು ಒಟ್ಟಾಗಿಸುವ, ಸಾಮರಷ್ಯದ, ಶಾಂತಿಯ ಬದುಕನ್ನು ಕೊಡುವ ಶಿಕ್ಷಣ ನೀಡಬೇಕಾಗಿದೆ ಎಂದು ಹೇಳಿದರು. ಕನ್ನಡ ಶಾಲೆಗಳು ಮುಚ್ಚಿ ಹೋಗುತ್ತಿರುವುದು ನೋವಿನ ಸಂಗತಿ ಎಂದು ಅವರು ಹೇಳಿದರು. ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಪ್ರಶಸ್ತಿ ಪಡೆದವರನ್ನು ಅಭಿನಂದಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ಮಾತನಾಡಿ ‘ಶಿಕ್ಷಣ ಪದ್ದತಿಯಲ್ಲಿ ಸರಕಾರಗಳು ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳದ ಕಾರಣ ಗೊಂದಲ ಉಂಟಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ನೀತಿಯ ಬಗ್ಗೆ ಚಿಂತಿಸುವ ಕೆಲಸ ಆಗಬೇಕಿದೆ. ರಾಜಕೀಯವನ್ನು ಮೆಟ್ಟಿನಿಂತ್ತು ವಿದ್ಯಾರ್ಥಿಗಳ ಶಿಕ್ಷಣ ವ್ಯವಸ್ಥೆ ಯನ್ನು ರೂಪಿಸುವ ಕೆಲಸ ಆಗಬೇಕಿದೆ ಎಂದರು.
ಬೆಂಗಳೂರು ಕಿವಾನಿ ಇಂಟರ್ ನ್ಯಾಶನಲ್ ಗ್ರೂಪ್‌ನ ನಿರ್ದೇಶಕ ರಾಜಣ್ಣ, ಗ್ರಾಮ ಪಂಚಾಯಿತಿ ಸದಸ್ಯ ದಿವಾಕರ ಪೈಲಾರು ಅತಿಥಿಗಳಾಗಿದ್ದರು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ಚೊಕ್ಕಾಡಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಚೈತ್ರ ಯು. ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಮಾಯಿಪಡ್ಕ , ಶಾಲಾ ವಿದ್ಯಾರ್ಥಿ ನಾಯಕ ಅಭಿಜಿತ್ ಕೆ, ವಿದ್ಯಾರ್ಥಿ ನಾಯಕಿ ಹಸ್ತಾ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಧ್ಯಾಕುಮಾರಿ ಸ್ಮರಣ ಸಂಚಿಕೆಯ ಬಗ್ಗೆ ಮಾತನಾಡಿದರು.ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು ವಂದಿಸಿದರು. ದಯಾನಂದ ಪತ್ತುಕುಂಜ ಹಾಗೂ ಸೋಮಶೇಖರ ಹಾಸನಡ್ಕ ಕಾರ್ಯಕ್ರಮ ನಿರೂಪಿಸಿದರು.