Ad Widget

ಹರಿಹರ ಪಲ್ಲತ್ತಡ್ಕ : ಜ.21 ರಂದು ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ ಮದ್ಯಾಹ್ನ 01:30 ರವರೆಗೆ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದ್ದು, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಲ| ಡಾ.ತ್ರಿಮೂರ್ತಿ ಶಿಬಿರವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಳ್ಯ ಕೆ.ವಿ.ಜಿ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ| ಕೆ.ವಿ ಚಿದಾನಂದ, ಹಿರಿಯ ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ, ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ಕುಲದೀಪ್, ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ ಇದರ ಅಧ್ಯಕ್ಷರಾದ ಪ್ರದೀಪ್ ಕಜ್ಜೋಡಿ, ವಿಶ್ವ ಯುವಕ ಮಂಡಲ ಬಾಳುಗೋಡು ಇದರ ಅಧ್ಯಕ್ಷರಾದ ರಾಜೇಶ್ ಕಿರಿಭಾಗ, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇದರ ಅಧ್ಯಕ್ಷರಾದ ಡ್ಯಾನಿ ಯಳದಾಳು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading