Ad Widget

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ಪಲ್ಲಕ್ಕಿ ಉತ್ಸವ, ವಸಂತ ಕಟ್ಟೆ ಪೂಜೆ, ನೃತ್ಯ ಬಲಿ, ಮಹಾಪೂಜೆ, ಶ್ರೀ ಭೂತ ಬಲಿ ನೆರವೇರಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಇಂದು ಸಂಜೆ ಗಂಟೆ 5.30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಶ್ರೀ ಸತೀಶ್ ಶೆಟ್ಟಿ ಇವರ ಸಾರಥ್ಯದಲ್ಲಿ ಅಯೋಧ್ಯಾ ದೀಪ ಯಕ್ಷಗಾನ ಬಯಲಾಟ ನಡೆಯಲಿರುವುದು.

. . . . . . . . .

ದಿನಾಂಕ 19-01-2024ನೇ ಶುಕ್ರವಾರ ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ಭಂಡಾರ ಬರುವುದು, ಬ್ರಹ್ಮರಥೋತ್ಸವ, ಪೆರುವಾಜೆ ಬಿಡಿ ಪ್ರದರ್ಶನ ಜರುಗರಲಿರುವುದು. ರಾತ್ರಿ ಗಂಟೆ 10.30ಕ್ಕೆ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನೆರವೇರಲಿದೆ. ದಿನಾಂಕ 20-01-2024ನೇ ಶನಿವಾರ ಬೆಳಗ್ಗೆ ಗಂಟೆ 7.00ಕ್ಕೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ,
ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ನಂತರ ಉಳ್ಳಾಕುಲು, ಮೈಷಂತಾಯ, ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ದೈವದ ಭಂಡಾರ ತೆಗೆಯುವುದು..ದಿನಾಂಕ 21-01-2024ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 7.00ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಿಗ್ಗೆ ಗಂಟೆ 6.00ಕ್ಕೆ ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ರಿಂದ ಶ್ರೀ ದೇವರಿಗೆ ಸಂಪ್ರೋಕ್ಷಣೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಗಂಟೆ 12.15ರಿಂದ ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ನೇಮೋತ್ಸವ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 7.00ಕ್ಕೆ ಶ್ರೀ ಕಲ್ಲುರ್ಟಿ, ಕಲ್ಕುಡ ದೈವದ ನೇಮ ನಡಾವಳಿ ಜರುಗಲಿರುವುದು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading