ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಜ.20 ರಂದು ಐವರ್ನಾಡು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ದೇರಾಜೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದ್ದು ಜನಪ್ರತಿನಿಧಿಗಳು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ದೇವಸ್ಥಾನದ ದ್ವಾರದಿಂದ ಪಂಚಾಯತ್ ಬಳಿ ಆಗಮಿಸಿದ ಪ್ರತಿಭಟನಾಕಾರರು ಸಭೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಅಜಿತ್ ಐವರ್ನಾಡು ,ಅಶೋಕ್ ಎಡಮಲೆ,ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡ,ಪದ್ಮಕೋಲ್ಚಾರ್,ಶ್ರೀನಿವಾಸ ಮಡ್ತಿಲರವರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ ಹೊಂಡ ಗುಂಡಿಗಳಿಂದ ಕೂಡಿದೆ.ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗೆ ಲಕ್ಷ,ಕೋಟಿಯ ಆಶ್ವಾಸನೆ ನೀಡಿದ್ದಾರೆ .ಆದರೆ ಇಲ್ಲಿಯವರೆಗೆ ಯಾವುದೇ ರೀತಿಯ ರಸ್ತೆ ಅಭಿವೃದ್ದಿ ಮಾಡಿಲ್ಲ ಎಂದು ಹೇಳಿದರು.ನಾವು ಯಾವುದೇ ರಾಜಕೀಯ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ.ನಮ್ಮ ಧಾರ್ಮಿಕ ಕೇಂದ್ರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿಗೆ ಮಾತ್ರ ಪ್ರತಿಭಟನೆ ನಡೆಸುತ್ತೇವೆ.
ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತದೆ.ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಇವತ್ತಿನ ಪ್ರತಿಭಟನೆ ಕೇವಲ ಸಾಂಕೇತಿಕ ಪ್ರತಿಭಟನೆ .
ದೇವಸ್ಥಾನದ ಜಾತ್ರೆ ಕಳೆಯುವಷ್ಟರಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು.
ಇಲ್ಲವಾದರೆ ಮುಂದೆ ಮುಖ್ಯ ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆಯವರು ಮನವಿ ಸ್ವೀಕರಿಸಿದರು. ತಹಶೀಲ್ದಾರರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ಸರಕಾರಕ್ಕೆ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಮನವಿ ನೀಡಿದರು.
- Saturday
- November 23rd, 2024