Ad Widget

ಜ.22 : ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಉಂಟು ಮಾಡುವ ಸಾಧ್ಯತೆಗಳಿದ್ದು, ಅಹಿತಕರ ಘಟನೆಗಳು ನಡೆದು ಕೋಮು ಘರ್ಷಣೆಗಳಾಗಿ ಪರಿವರ್ತಿತಗೊಳ್ಳುವ ಸಂಭವಗಳಿರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯವಾಗಿರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕಟ್ಟುನಿಟ್ಟಾಗಿ ಕೇಂದ್ರ ಸ್ಥಾನದಲ್ಲಿದ್ದು, ಪರಿಸ್ಥಿತಿ ಬಗ್ಗೆ ನಿಗಾವಹಿಸಲು ಸುಳ್ಯ ತಾಲೂಕಿನಲ್ಲಿ ನಿಷೇದಾಜ್ಞೆಯನ್ನು ಜ್ಯಾರಿಗೊಳಿಸುವಂತೆ ತಹಶೀಲ್ದಾರ್ ಜಿ‌.ಮಂಜುನಾಥ್ ಆದೇಶದಲ್ಲಿ ತಿಳಿಸಿದ್ದಾರೆ. ನಿಷೇದಾಜ್ಞೆ ಅವಧಿಯಲ್ಲಿ ಈ ಕೆಳಗಿನ ಸೂಚನೆಗಳನ್ನು ಆದೇಶದಲ್ಲಿ ಸೂಚಿಸಿದೆ.

  1. 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.
  2. ಯಾವುದೇ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
  3. ಪಟಾಕಿಗಳನ್ನು ಸಿಡಿಸುವುದು ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
  4. ಯಾವುದೇ ರೀತಿಯ ಪ್ರತಿಭಟನೆ. ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಜಾಥಾ ಮುಷ್ಕರ. ರಸ್ತೆ ತಡೆ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.
  5. ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು, ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯಲ್ಲಿ ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ .6. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
  6. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು ಸ್ಪೋಟಕ ವಸ್ತುಗಳು ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದ ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ, ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು
  7. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ.
  8. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.
  9. ಸಾರ್ವಜನಿಕ ಕೋಮು ಸೌಹರ್ದಕ್ಕೆ ದಕ್ಕೆ ಬರವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪರ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳನ್ನು ಹಂಚುವುದು ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

ಈ ಆದೇಶವು ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 6.00 ಗಂಟೆಯಿಂದ ಜ.22ರ ಮಧ್ಯರಾತ್ರಿ 12.00 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!