
ಸುಳ್ಯ ತಾಲೂಕಿನಲ್ಲಿ ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ
ಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಆದೇಶ ಹೊರಡಿಸಿದ್ದರು. ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೂಡಲೇ ಪುನಃ ತಹಶೀಲ್ದಾರ್ ರವರು ಆದೇಶ ಹಿಂಪಡೆದ ಮರು ಆದೇಶ ಹೊರಡಿಸಲು ಸಿದ್ದತೆ ನಡೆಸಿರುವುದಾಗಿ ತಿಳಿಸಿದ್ದು ಹಿರಿಯ ಅಧಿಕಾರಿಗಳ ಆದೇಶದ ಬಳಿಕ ಅಧಿಕೃತವಾಗಿ ಆದೇಶ ಹೊರ ಬೀಳಲಿದೆ ಎಂದು ದೂರವಾಣಿಯ ಮೂಲಕ ತಿಳಿಸಿದ್ದಾರೆ.