(ವರದಿ : ಉಲ್ಲಾಸ್ ಕಜ್ಜೋಡಿ)
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ಕುಲದೀಪ್, ಸುಳ್ಯ ಕೆ.ವಿ.ಜಿ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ| ಮನೋಜ್ ಕುಮಾರ್, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ ಇದರ ಅಧ್ಯಕ್ಷರಾದ ಪ್ರದೀಪ್ ಕಜ್ಜೋಡಿ, ವಿಶ್ವ ಯುವಕ ಮಂಡಲ ಬಾಳುಗೋಡು ಇದರ ಅಧ್ಯಕ್ಷರಾದ ರಾಜೇಶ್ ಕಿರಿಭಾಗ, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇದರ ಅಧ್ಯಕ್ಷರಾದ ಡ್ಯಾನಿ ಯಳದಾಳು ಸೇರಿದಂತೆ ಎಲ್ಲಾ ಸಂಘಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು. 120ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಸತೀಶ್ ಕೂಜುಗೋಡು ಸ್ವಾಗತಿಸಿ ಕ್ಲಬ್ ನ ಸ್ಥಾಪಕಾಧ್ಯಕ್ಷರಾದ ಲ| ಪ್ರೋ.ರಂಗಯ್ಯ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ಲಬ್ ನ ಖಜಾಂಜಿ ಲ| ಚಂದ್ರಶೇಖರ ಪಾನತ್ತಿಲ ಧನ್ಯವಾದ ಸಮರ್ಪಿಸಿದರು.