
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದ್ದು ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬಿಡುಗಡೆ ಗೊಳಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ವಿವರಣೆಯನ್ನು ಸಚಿವರಿಗೆ ನೀಡಿ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹೋಪಾತ್ರ, ತಹಶೀಲ್ದಾರ್ ಜಿ.ಮಂಜುನಾಥ್ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ತಾಲೂಕು ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ, ಪತ್ರಕರ್ತರಾದ ದುರ್ಗಾಕುಮಾರ್ ನಾಯರ್ ಕೆರೆ, ಶಿವಪ್ರಸಾದ್ ಕೇರ್ಪಳ, ಮಿಥುನ್ ಕರ್ಲಪ್ಪಾಡಿ, ಗಿರೀಶ್ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.