ಬಿಜೆಪಿ ಯುವ ಮೋರ್ಚಾದ ವತಿಯಿಂದ
ನಮೋ ನವಮತದಾರ ಸಮ್ಮೇಳನ ದ ಕಾರ್ಯಕ್ರಮವು ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯದಲ್ಲಿ ಇಂದು ನಡೆಯಿತು.
ಸಮ್ಮೇಳನದ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನವಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು। ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕೃಷ್ಣ ಎಂ ಆರ್, ಪ್ರಧಾನ ಕಾರ್ಯದರ್ಶಿಗಳಾದ ಮನುದೇವ್ ಪರಮಲೆ ಹಾಗೂ ಸುನಿಲ್ ಕೇರ್ಪಳ, ಸುಳ್ಯ ನಗರ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ವಿನಯ ಕಂದಡ್ಕ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಹಾಗೂ ಸುಮಾರು 160 ನವಮತದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
- Tuesday
- December 3rd, 2024