2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವ ಸಲುವಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು ಈ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ನೀಡಲು ಜಿಲ್ಲಾ ಮಟ್ಟದ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಅವಶ್ಯಕತೆ ಇರುತ್ತದೆ. ನಾಮನಿರ್ದೇಶಿತ ಸದಸ್ಯರ ಕಾರ್ಯವಧಿಯು 2 ವರ್ಷಗಳಾಗಿರುತ್ತದೆ. ಅದರಂತೆ ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳಾಗಿ ನಾಮನಿರ್ದೇಶಿತ ಸದಸ್ಯತ್ವಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಇಚ್ಚಿಸಿದ ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ದ.ಕ ಜಿಲ್ಲೆ ಮಂಗಳೂರು ಇವರಿಗೆ ಅರ್ಜಿಯನ್ನು ಸಲ್ಲಿಸುವುದು. ನಿರ್ದಿಷ್ಟ ದಿನಾಂಕದಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್ ಅಂಬೇಡ್ಕರ್ ಭವನ, ಅಂಗಡಿಗುಡ್ಡೆ ಉರ್ವಸ್ಟೋರ್ಸ್, ಆಶೋಕನಗರ ಅಂಚೆ ಮಂಗಳೂರು-575006 ದೂರವಾಣಿ ಸಂಖ್ಯೆ: 0824-2451237 ಇವರನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.01.2024 ಆಗಿರುತ್ತದೆ.