

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಆಯ್ಕೆಯಾಗಿದ್ದರು. ಜ.28ರಂದು ಮುದ್ದೇಬಿಹಾಳದ ವಿಬಿಸಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶೈಲೇಶ್ ಅಂಬೆಕಲ್ಲು ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸುಮಾರು 7000 ಮಿಕ್ಕಿ ಜನ ನೆರೆದಿದ್ದರು.
