- Wednesday
- April 2nd, 2025

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಜ.28 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಕೆನಡಾದಲ್ಲಿ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿಯ ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ಟರ್ ರುದ್ರಚಾಮುಂಡಿ, ಕ್ರೀಡಾ ಸಮಿತಿ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಜಿಲ್ಲಾಡಳಿತ, ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಊರವರ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.29 ರಂದು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು. ಗ್ರಾಮ...

ರಾಜ್ಯ ಪ್ರಶಸ್ತಿ ಪುರಸ್ಕೃತ ಪೆರುವಾಜೆ ಭಾವೈಕ್ಯ ಯುವಕ ಮಂಡಲವನ್ನು ಪೆರುವಾಜೆಯಲ್ಲಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಕ್ತ ವೃಂದ ಪೆರುವಾಜೆ ವತಿಯಿಂದ ಸನ್ಮಾನಿಸಲಾಯಿತು.

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಜ.26 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲಮೊಗ್ರು ಇಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸಮವಸ್ತ್ರ ವಿತರಣೆ ನಡೆಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ...

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರ್ಣಕಜೆ ನಿವಾಸಿ ಗುರುವ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಗುರುವ ರವರು ಜ.27ರಂದು ಬೆಳಿಗ್ಗೆ ಪೈಲಾರಿನ ತನ್ನ ಕುಟುಂಬದ ಮನೆಯಲ್ಲಿ ಅಷ್ಟಮಂಗಲ ಪ್ರಶ್ನೆಗೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮನೆಯವರು, ನೆರೆಹೊರೆಯ ಮನೆಯವರು ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಇಂದು ಧರ್ಮಸ್ಥಳಕ್ಕೆ ಹೋಗಿಯೂ...

ಒಂಟಿಸಲಗವೊಂದು ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಓಮಿನಿ ಕಾರಿಗೆ ಹಾನಿ ಮಾಡಿ ತೆರಳಿರುವ ಘಟನೆ ಇಂದು ಬೆಳಿಗ್ಗೆ 8.30 ರ ವೇಳೆಗೆ ನಡೆದಿದೆ, ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಕಾರು ಇದಾಗಿದ್ದು, ಕಾರಿನ ಚಾಲಕ ಗೂನಡ್ಕ ಅವಿನಾಶ್ ಅಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ...

ಜ.28ರಂದು ಬೆಳ್ತಂಗಡಿ ಸಮೀಪ ಪಟಾಕಿ ಗೋಡಾನ್ನಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಪೋಟ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಶೀರ್ ಎಂಬಾತ ತನ್ನ ತೋಟದ ಶೆಡ್ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ...

ಐವರ್ನಾಡು : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಗ್ರಾಮ ಸಮಿತಿಯಾದ ನಿವೇದಿತಾ ಸಂಚಾಲನ ಸಮಿತಿ ರಚಿಸಲಾಯಿತು. ನೂತನ ಸಮಿತಿ ಸಂಚಾಲಕರಾಗಿ ರಾಜೀವಿ ಪರ್ಲಿಕಜೆ , ಸಹ ಸಂಚಾಲಕರಾಗಿ ಸೌಮ್ಯ ಪಾಲೆಪ್ಪಾಡಿ ಆಯ್ಕೆಯಾದರು ಸಮಿತಿಯ ಸದಸ್ಯರುಗಳಾಗಿ ಶ್ರೀಮತಿ ರೇವತಿ ಬೋಳುಗುಡ್ಡೆ, ಶ್ರೀಮತಿ ಕುಸುಮಾಕ್ಷಿ ದೊಡ್ಡಮನೆ, ಶ್ರೀಮತಿ ದಿವ್ಯಾ ಕೈಯೋಲ್ತಡ್ಕ, ಶ್ರೀಮತಿ ವಿದ್ಯಾ ಆರಿಕಲ್ಲು, ಶ್ರೀಮತಿ...

All posts loaded
No more posts