
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.