Ad Widget

ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ

ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು ತಮಗೆಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ ಇವಿಎಂ ಮೂಲಕ ಚುನಾವಣೆ ನಡೆಸುವುದಕ್ಕೆ ತುಂಬಾ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಮುಂದೆ ಭಾರತ ದೇಶದಲ್ಲಿ ಇವಿಎಂ ಮೂಲಕ ನಡೆಯುವ ಚುನಾವಣೆಯನ್ನು...

ಸುಳ್ಯ; ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ

ಜ. 30 ರಂದು ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಹಾಗೂ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು. ಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಚಂದ್ರಶೇಖರ...
Ad Widget

ಜೂಜಿನ ಕೋಳಿ ಅಂಕ ನಡೆಸುವುದು ಕಾನೂನೂ ಬಾಹಿರ – ಖಡಕ್ ಸಂದೇಶ ರವಾನಿಸಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ

ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬAದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಖಡಕ್...

ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಅಧಿಕಾರ ಸ್ವೀಕಾರ

ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿಯಾವರು ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ  ಅಧಿಕಾರ ಸ್ವೀಕಾರಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಜ.30 ರಂದು ಅಧಿಕಾರ ಸ್ವೀಕರಿಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸಮಿತಿ ಸದಸ್ಯರು,ದೇವಸ್ಥಾನದ ಕಚೇರಿ...

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿ ವರ್ಗಾವಣೆ

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿಯವರು ಮಂಗಳೂರಿನ ಡಿ.ಸಿ.ಆರ್.ಇ ಗೆ ವರ್ಗಾವಣೆಗೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ಮೋಹನ್ ಕೊಠಾರಿಯವರು ಸುಳ್ಯಕ್ಕೆ ವರ್ಗಾವಣೆ ಗೊಂಡು ಬಂದಿದ್ದರು. ಸುಳ್ಯಕ್ಕೆ ಯಾರನ್ನು ನಿಯೋಜಿಸಿಲ್ಲ ಎಂದು ತಿಳಿದುಬಂದಿದೆ.

ಹಿರಿಯರ ಕ್ರೀಡಾಕೂಟ : ದಮಯಂತಿ ಮುತ್ಲಾಜೆ(ಬೊಳ್ಳೂರು) ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಇತ್ತೀಚೆಗೆ ದಿನಾಂಕ 13 & 14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್‌, 400 ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್‌ ಮತ್ತು 1500 ಮೀ‌ಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ‌ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ...
error: Content is protected !!