
ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿಯಾವರು ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರಿಸಿದರು.
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಜ.30 ರಂದು ಅಧಿಕಾರ ಸ್ವೀಕರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸಮಿತಿ ಸದಸ್ಯರು,ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.