ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು ತಮಗೆಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ ಇವಿಎಂ ಮೂಲಕ ಚುನಾವಣೆ ನಡೆಸುವುದಕ್ಕೆ ತುಂಬಾ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಮುಂದೆ ಭಾರತ ದೇಶದಲ್ಲಿ ಇವಿಎಂ ಮೂಲಕ ನಡೆಯುವ ಚುನಾವಣೆಯನ್ನು ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಮುಕ್ತ ಚುನಾವಣೆ ನಡೆಸುವಂತೆ ಒತ್ತಾಯಿಸಿ ಫೆಬ್ರವರಿ ತಿಂಗಳ 8 ನೇ ತಾರೀಕಿನಂದು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರ್ಥನೆ ಸಲ್ಲಿಸಿ ಕಾಲ್ನಡಿಗೆ ಮೂಲಕ ಪಾದಯಾತ್ರೆಯ ಸುಳ್ಯದ ತಾಲೂಕ್ ಕಚೇರಿ ತನಕ ನಡೆಯಲಿದ್ದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವವರಿದ್ದು, ಈ ಕಾಲ್ನಡಿಗೆ ಜಾಥಾದಲ್ಲಿ ಸುಳ್ಯದ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘ ಸಂಸ್ಥೆಗಳು, ಹೋರಾಟಗಾರರು, ಸಾರ್ವಜನಿಕರು ಭಾಗವಹಿಸಲು ಇಚ್ಛಿಸುವವರು ಸಂಪಾಜೆಯಿಂದಲೇ ಭಾಗವಹಿಸಬಹುದೆಂದು ರೈತ ಸಂಘದ ನಾಯಕ ದಿವಾಕರ ಪೈ ಆರಂಬೂರುರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
- Thursday
- November 21st, 2024