- Thursday
- April 3rd, 2025

ಜ. 30 ರಂದು ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಹಾಗೂ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು. ಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಚಂದ್ರಶೇಖರ...

ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬAದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಖಡಕ್...

ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿಯಾವರು ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಜ.30 ರಂದು ಅಧಿಕಾರ ಸ್ವೀಕರಿಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸಮಿತಿ ಸದಸ್ಯರು,ದೇವಸ್ಥಾನದ ಕಚೇರಿ...

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿಯವರು ಮಂಗಳೂರಿನ ಡಿ.ಸಿ.ಆರ್.ಇ ಗೆ ವರ್ಗಾವಣೆಗೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ಮೋಹನ್ ಕೊಠಾರಿಯವರು ಸುಳ್ಯಕ್ಕೆ ವರ್ಗಾವಣೆ ಗೊಂಡು ಬಂದಿದ್ದರು. ಸುಳ್ಯಕ್ಕೆ ಯಾರನ್ನು ನಿಯೋಜಿಸಿಲ್ಲ ಎಂದು ತಿಳಿದುಬಂದಿದೆ.

ಇತ್ತೀಚೆಗೆ ದಿನಾಂಕ 13 & 14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಮತ್ತು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ...

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಜ.28 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಕೆನಡಾದಲ್ಲಿ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿಯ ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ಟರ್ ರುದ್ರಚಾಮುಂಡಿ, ಕ್ರೀಡಾ ಸಮಿತಿ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಜಿಲ್ಲಾಡಳಿತ, ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಊರವರ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.29 ರಂದು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು. ಗ್ರಾಮ...

ರಾಜ್ಯ ಪ್ರಶಸ್ತಿ ಪುರಸ್ಕೃತ ಪೆರುವಾಜೆ ಭಾವೈಕ್ಯ ಯುವಕ ಮಂಡಲವನ್ನು ಪೆರುವಾಜೆಯಲ್ಲಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಕ್ತ ವೃಂದ ಪೆರುವಾಜೆ ವತಿಯಿಂದ ಸನ್ಮಾನಿಸಲಾಯಿತು.

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...

All posts loaded
No more posts