ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನದಲ್ಲಿ ಜ.29ರಂದು ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಧ್ವಜಾರೋಹಣ ಮಾಡುವುದರೊಂದಿಗೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಶಲ ಉದ್ದಂತಡ್ಕ, ಸದಸ್ಯರಾದ ಶ್ರೀಮತಿ ವಿನುತ ಪಾತಿಕಲ್ಲು, ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ಇದರ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ ವಿ, ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಯಂ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ. ಎ., ವಿಧ್ಯಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ. ಎಸ್., ಕಾರ್ಯದರ್ಶಿಯಾದ ಕು. ಶ್ರೀಜ ರೈ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಭಿರಾರ್ಥಿಗಳಾದ ಕು. ಅಶ್ವಿನಿ ಮತ್ತು ಕು.ರುಚಿತ ಇವರು ಪ್ರಾರ್ಥಿಸಿ, ಕು. ಲಕ್ಷ್ಮೀಶ್ರೀ ಸ್ವಾಗತಿಸಿ, ಶಶಾಂಕ್ ಕೊಯಿಲ ವಂದಿಸಿದರು. ಕು. ಲತಾಶ್ರೀ ಹಾಗೂ ಕು. ಸುಮಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು.
ಎನ್.ಎಸ್. ಎಸ್ ಶಿಬಿರವು ಜ.29ರಿಂದ ಫೆ.4ರ ರನಕ ಮಂಡೆಕೋಲಿನಲ್ಲಿ ಜರುಗಲಿರುವುದು.
ಈ ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಾಗೂ ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುವುದು.
- Thursday
- November 21st, 2024