
ಮಂಡೆಕೋಲು ಗ್ರಾಮದ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿಯವರು ಜ.28ರಂದು ಆಯ್ಕೆಯಾಗಿದ್ದಾರೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ವಿವಿಧ ಸಮಿತಿಯವರು, ದೇವಸ್ಥಾನ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತಿಯಲ್ಲಿದ್ದರು.
ಜೀರ್ಣೋದ್ಧಾರ ಸಮಿತಿಯ ಖಜಾಂಚಿಯಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವ ಮೂರ್ತಿ ಹೆಬ್ಬಾರ್ ಕಾರ್ಯನಿರ್ವಹಿಸಲಿದ್ದಾರೆ. ಧಾರ್ಮಿಕ ದತ್ತಿಯ ನಿರ್ದೇಶನದಂತೆ, ಹಾಗೂ ಇನ್ನಿಬ್ಬರು ವ್ಯವಸ್ಥಾಪನ ಸಮಿತಿಯ ಸದಸ್ಯರು ಜೀರ್ಣೋದ್ದಾರ ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ತಿಳಿದುಬಂದಿದೆ.