ಪಂಜ ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ- ಬಂಟಮಲೆಯಿಂದ ತೀರ್ಥ





ಜ.24 ರಿಂದ ಫೆ.9 ರ ತನಕ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.

ಫೆ.2 ರಂದು ಮುಂಜಾನೆ ಬಂಟಮಲೆಯ ತೀರ್ಥದ ಸ್ಥಳದಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತರಲಾಯಿತು. ಉತ್ಸವ, ಮಹಾಪೂಜೆ ಜರುಗಲಿದೆ.ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು , ಸೀಮೆಯ‌ ಭಕ್ತಾದಿಗಳು ಪಾಲ್ಗೊಂಡಿದ್ದರು.

ಇಂದು ರಾತ್ರಿ ಗಂಟೆ 7 ರಿಂದ ಪ್ರಣತಿ ಚೈತನ್ಯ ಪದ್ಯಾನ ಮತ್ತು ಪದಯಾನ ತಂಡದವರಿಂದ ಭರತನಾಟ್ಯ ಪ್ರದರ್ಶನ ಗೊಳ್ಳಲಿದೆ.
ಫೆ.1 ರಂದು ಸಂಜೆ ತಂತ್ರಿ ಆಗಮನ, ಧ್ವಜಾರೋಹಣ ನಡೆದು ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಫೆ.3.ರಂದು ಮಹಾಪೂಜೆ , ನಿತ್ಯಬಲಿ ಸಂಜೆ ಹಸಿರು ಕಾಣಿಕೆ ಮೆರವಣಿಗೆ ಪುತ್ಯ ಕಟ್ಟೆಯಿಂದ ಆರಂಭ ಗೊಂಡು ದೇವಳಕ್ಕೆ ಸಮರ್ಪಣೆ ಗೊಳ್ಳಲಿದೆ. ದಂಡಮಾಲೆ ಹಾಕಿ ಬಲಿ , ಬೇತಾಳಗಳು ಇಳಿಯುವುದು.ಫೆ4. ರಂದು ಶ್ರೀ ದೇವರ ಉತ್ಸವ, ಮಹಾ ಪೂಜೆ.ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಜರುಗಲಿದೆ.

ಫೆ.7.ರಂದು ಕವಾಟೋದ್ಜಾಟನೆ ದೇವರಿಗೆ ಅಭಿಷೇಕ ,ಬಲಿ ಹೊರಟು ಅವಭೃತ ಸ್ನಾನ ,ಧ್ವಜಾವರೋಹಣ , ಮಹಾಪೂಜೆ ಜರುಗಲಿದೆ.ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ. ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ ಜರುಗಲಿದೆ.
ಫೆ .3.ಹಸಿರು ಕಾಣಿಕೆ ಮೆರವಣಿಗೆಯಲ್ಲಿ ಮತ್ತು ಫೆ.6. ರಾತ್ರಿ ಬ್ರಹ್ಮ ರಥೋತ್ಸವದ ವೇಳೆ ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ ವಿಶೇಷ ಆಕರ್ಷಣೆಯಾಗಲಿದೆ.
ಜ.3 ರಂದು ರಾತ್ರಿ ಗಂಟೆ 7 ರಿಂದ ಡಾನ್ಸ್ & ಬೀಟ್ಸ್ ಪಂಜ ಮತ್ತು ಬೆಳ್ಳಾರೆ ಇದರ ವಿದ್ಯಾರ್ಥಿಗಳಿಂದ ನೃತ್ಯ ಸಂಭ್ರಮ ಪ್ರದರ್ಶನ ಗೊಳ್ಳಲಿದೆ.

ಫೆ.5 ರಂದು ರಾತ್ರಿ ಗಂಟೆ 7 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ರವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ನಡೆಯಲಿದೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading