

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಶನಿವಾರ ಬಿಡುಗಡೆ ಮಾಡಿ ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮೊದಲಾದವರು ಉಪಸ್ಥಿತರಿದ್ದರು.