ಎಸ್.ಎಸ್.ಎಲ್.ಸಿ ಫಲಿತಾಂಶ ಉನ್ನತ್ತೀಕರಿಸುವಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಪಾತ್ರ ಪ್ರಾಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯತೆ ಇದೆ ಎಂದು ನಿವೃತ್ತ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದರು.
ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಾಗಾರ ದಲ್ಲಿ ಮಾತನಾಡಿ, ಪೂರ್ವ ಸಿದ್ಧತೆಗಳ ಮೂಲಕ ಉತ್ತಮ ಫಲಿತಾಂಶ ಕಾಣಬಹುದು. ಇದರ ಜತೆಗೆ ಆರೋಗ್ಯ, ನೈತಿಕ, ಸಾಮಾಜಿಕ ಮೌಲ್ಯ ಗಳು ಶಿಕ್ಷಣ ದ ಮೇಲೆ ಪ್ರಭಾವಬೀರುತ್ತದೆ ಎಂದರು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿ, ಮಾತನಾಡಿದರು.
ಶಿಕ್ಷಕಿ ಮೀನಾಕುಮಾರಿ. ಕೆ ಸ್ವಾಗತಿಸಿ, ಶಿಕ್ಷಕಿ ಸವಿತಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ್ ಕುದ್ಪಾಜೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದ, ಪೋಷಕ ವೃಂದ ಉಪಸ್ಥಿತರಿದ್ದರು.
- Tuesday
- December 3rd, 2024