
ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಇಂದು ಅದ್ದೂರಿ ಅದ್ದೂರಿ ಚಾಲನೆ ನೀಡಲಾಯಿತು. ಧ್ವಜಾರೋಹಣ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ಜಜರೋಹಣ ನೆರವೇರಿಸಿದರು. ಅದ್ದೂರಿಯಾಗಿ ನಡೆದ ಮೆರವಣಿಗೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ಚಾಲನೆ ನೀಡಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ದಾನಿ ಹಾಗೂ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ, ಜಿ.ಪಂ.ಮಾಜಿ ಸದಸ್ಯ ಭರತ್ ಮುಂಡೋಡಿ, ನಿವೃತ್ತ ಬಿಡಿಒ ಎಂ. ಮೀನಾಕ್ಷಿ ಗೌಡ, ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ, ಪ್ರ.ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಶತಮಾನೋತ್ಸವ ಸಮಿತಿ ಪ್ರ.ಕಾರ್ಯದರ್ಶಿ ಪ್ರೀತಂ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಯ ಅಭಿವೃದ್ಧಿಗಾಗಿ ಧನಸಹಾಯ ನೀಡಿದ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ನಿತ್ಯಾನಂದ ಮುಂಡೋಡಿ ಸ್ವಾಗತಿಸಿ, ಮುಖ್ಯಶಿಕ್ಷಕಿ ವಾಣಿ ಕೆ.ಎಸ್.ವಂದಿಸಿದರು. ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು.