

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತ್ ಗುತ್ತಿಗಾರು ಶಂಖಶ್ರೀ ಸ್ತ್ರೀ ಶಕ್ತಿ ಗೊಂಚಲು ಗುತ್ತಿಗಾರು ಹಾಗೂ ಅಮರ ಸಂಜೀವಿನಿ ಒಕ್ಕೂಟ ಗುತ್ತಿಗಾರು ಇದರ ಸಹಯೋಗದಲ್ಲಿ ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ ಯೋಜನೆ ಅಡಿ ಜಾಥಾ’ ಕಾರ್ಯಕ್ರಮದಲ್ಲಿ ಮತ್ತು ಬಾಗಿದಾರರಿಗೆ ಅರಿವು ಕಾರ್ಯಕ್ರಮವು ಗುತ್ತಿಗಾರು ಗ್ರಾಮಪಂಚಾಯತ್ ಗಿರಿಜನ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್‌ನ ಉಪಾಧ್ಯಕ್ಷೆ ಭಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.