
ಸುಳ್ಯ ತಾಲೂಕು ಕನ್ನಡ ಪರಿಷತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಏರ್ಪಡಿಸಿದ ಶಾಲಾ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮವು ಫೆ.೧೨ರಂದು ಅಪರಾಹ್ನ ೨.೩೦ಕ್ಕೆ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಲಿದೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ ಇವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕ್ಷೇತ್ರ ಸಂಪನ್ಮೂಲ ಸಮಾನ್ವಯಾಧಿಕಾರಿ ಶೀತಲ್ ಯು ಕೆ ಇವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಇವರು ವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಶಿಕ್ಷಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
