Ad Widget

ಲಯನ್ಸ್ ಕ್ಲಬ್ ಗುತ್ತಿಗಾರು – ಸೈನ್ಯಕ್ಕೆ ಸೇರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

ಗುತ್ತಿಗಾರು ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಆಶ್ರಯದಲ್ಲಿ ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಸವಿವರವಾದ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸೈನಿಕ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರು ಮಾಹಿತಿ ಹಂಚಿಕೊಂಡರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಜಯರಾಮ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರು ಹೈಸ್ಕೂಲು ಮುಖ್ಯಗುರುಗಳಾದ ನೆಲ್ಸನ್ ಕೆಸ್ಟಲಿನೋ ಅತಿಥಿಗಳನ್ನು ಸ್ವಾಗತಿಸಿದರು. ಲಯನ್ಸ್ ಕಾರ್ಯಕ್ರಮ ‘ಇನ್ಸ್ಪಯರ್ ಯುತ್’ ನ ಜಿಲ್ಲಾ ಸಂಯೋಜಕರಾದ ಪ್ರವೀಣ್ ಮುಂಡೋಡಿಯವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಲಯನ್ಸ್ ಕ್ಲಬ್ ನ ಉಪಾದ್ಯಕ್ಷ ನವೀನ್ ಬಾಳುಗೋಡುರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸೈನ್ಯಕ್ಕೆ ಸೇರುವ ಬಗ್ಗೆ ಮಾಹಿತಿ ತಿಳಿದುಕೊಂಡದ್ದಲ್ಲದೆ, ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಕಾಲೇಜು ಮುಖ್ಯ ಶಿಕ್ಷಕರಾದ ಚೆನ್ನಮ್ಮ ಮೋಹನ್ ರವರು ಧನ್ಯವಾದಗೈದರು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜು ಶಿಕ್ಷಕಿ ಪ್ರೀತಿ ರೈಯವರು ನೆರವೇರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading