Ad Widget

ಅರಂತೋಡು; ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ


ದೇಶದ ಸಾರ್ವತ್ರಿಕ ಚುನಾವಣೆಯು ಸಮೀಪಿಸುತ್ತಿದ್ದು, ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.
ಬಹು ವರ್ಷಗಳ ಬೇಡಿಕೆಯಾದ ಅರಂತೋಡಿನಿಂದ ಅಂಗಡಿಮಜಲು – ಪಾರೆಮಜಲು , ಮಂಟಮೆಗುಡ್ಡೆ ಮೂಲಕ ಮರ್ಕಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಹೋಗಲಾಗದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಅಭಿವೃದ್ಧಿ ಕೆಲಸ ಇನ್ನೂ ಆರಂಭಗೊಂಡಿಲ್ಲ. ಇದೀಗ ದೇಶದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಪರಿಸರದಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!