ಫೆ.13 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್ ಮಂಗಳೂರು ಇಲ್ಲಿ ಗೃಹರಕ್ಷಕರಿಗೆ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ಶಿಬಿರ ನಡೆಯಿತು. ದ ಕ ಜಿಲ್ಲಾ ಗ್ರಹ ರಕ್ಷಕ ದಳ,ಲಯನ್ಸ್ ಕ್ಲಬ್ ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಇವರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಲಯನ್ ಶೀನ ಪೂಜಾರಿ, ಅಧ್ಯಕ್ಷರು, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಡಾ|| ಮಹಾಲಿಂಗ ಶರ್ಮ ಸಂಪತ್ತಿಲ, ಹಿರಿಯ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಜನರ ಜೀವ ಉಳಿಸಲು ಗೃಹರಕ್ಷಕರನ್ನು ತರಬೇತಿಗೊಳಿಸಿ ಅವರನ್ನು ಜೀವರಕ್ಷಕರನ್ನಾಗಿ ತಯಾರಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ಅಪಘಾತ ಅಥವಾ ಇನ್ನಾವುದೇ ಅವಘಡಗಳಾದಾಗ ತಕ್ಷಣವೇ ಸ್ಪಂದಿಸಲು ಈ ತರಬೇತಿ ಗೃಹರಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ವೈದ್ಯರಾದ ಜನರಲ್ ಸರ್ಜನ್ ಡಾ|| ಕಿಶನ್ ರಾವ್ ಬಾಳಿಲ ಇವರು ಶಿಬಿರವನ್ನು ನಡೆಸಿಕೊಟ್ಟರು. ಅವರು ಮಾತನಾಡಿ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ಎಲ್ಲರಿಗೂ ದೊರಕಬೇಕು. ಸಾಮಾನ್ಯ ಮನುಷ್ಯರೂ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಗ್ರಹರಕ್ಷಕರಿಗೆ ನೀಡುವ ತರಬೇತಿ ಸ್ವಾಗತಾರ್ಹ ಎಂದು ನುಡಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಇದರ ಜೊತೆ ಕಾರ್ಯದರ್ಶಿಯಾದ ಶ್ರೀ ದಿನಕರ್ ಕೋಟ್ಯಾನ್ ಮತ್ತು ಜೊತೆ ಕೋಶಾಧಿಕಾರಿ ಶ್ರೀ ನಾರಾಯಣ ಕೋಟ್ಯಾನ್ ಉಪಸ್ಥಿತರಿದ್ದರು. ಗೃಹರಕ್ಷಕ, ಗೃಹರಕ್ಷಕಿಯರು ಈ ಶಿಬಿರದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು. ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ನಿರಂತರ ನಡೆಯ ಬೇಕು…ಡಾ ಮಹಾಲಿಂಗ ಶರ್ಮಾ. ಗ್ರಹ ರಕ್ಷಕರ ಸಮಾಜ ಮುಖಿ ಸೇವೆಗೆ ಲಯನ್ಸ್ ಕ್ಲಬ್ ಮಂಗಳೂರು ನಿರಂತರ ಸಹಾಯ ನೀಡಿದೆ ಮತ್ತು ಮುಂದೆಯೂ ನೀಡಲಿದೆ….ಲಯನ್ ಸೀನ ಪೂಜಾರಿ ಹೇಳಿದರು.