ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಹಾಸಮ್ಮೇಳನದ ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು ಕರಪತ್ರ ಬಿಡುಗಡೆ ಫೆ 15 ರಂದು ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಸಂಘದ ಅಧ್ಯಕ್ಷರಾದ ತೀರ್ಥರಾಮ ಎಚ್.ಬಿ. ಕಾರ್ಯದರ್ಶಿಯಾದ ಧನಲಕ್ಷ್ಮಿ ಬಿ. ಖಜಾಂಚಿಯಾದ ಮಹದೇವ ರಾಜ್ಯ ಪರಿಷತ್ ಸದಸ್ಯರಾದ ಪೃಥ್ವಿ ಕುಮಾರ್ ಟಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಕೆ ವಿ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವೀಣಾ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ದೇವರಾಜ್, ಟಿಜಿಟಿ ಶಿಕ್ಷಕರಾದ ಶಿವಕುಮಾರ್ ಪೂರ್ಣಿಮಾ ಮಧುಸೂದನ್, ಮತ್ತಿತರ ಶಿಕ್ಷಕರು, ಸಂಘದ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.
ಫೆ.27 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಉಪಸ್ಥಿತಿಯಲ್ಲಿ ಹಾಗೂ ಮಾನ್ಯ ರಾಜ್ಯಾಧ್ಯಕ್ಷರಾದ ಸಿ. ಎಸ್ ಷಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಹಾಜರಾಗುವ ನೌಕರರುಗಳಿಗೆ ಉಚಿತವಾದ ಬಸ್ ವ್ಯವಸ್ಥೆ ಹಾಗೂ ಎರಡು ದಿನ ಒಒಡಿ ಸೌಲಭ್ಯವಿದೆ ಎಂದು ನೌಕರರ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024