Ad Widget

ಸುಬ್ರಹ್ಮಣ್ಯ ಗ್ರಾ. ಪಂ. ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ        

    ಸುಬ್ರಮಣ್ಯ : ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿ ಫೆ,17 ಶನಿವಾರ ಅನಾವರಣಗೊಳಿಸಲಾಯಿತು.  

. . . . . . . . .

       

. . . . . . .

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡಿ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ, ಮತ್ತು ವರ್ಗ ರಹಿತ ಸಮಾಜ, ಜೀವನ ಮಾರ್ಗ, ಸರ್ವಕಾಲಕ್ಕೂ ದಾರಿದೀಪವಾಗಿದೆ. ಅಲ್ಲದೆ ಜಗಜ್ಯೋತಿ ಬಸವಣ್ಣ ನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ,ಸರ್ವಜನ, ಸಮಭಾವದ , ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವರು ಎಂದು ನುಡಿದರು. ಇದೇ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಅವರು ಮಾತನಾಡಿ ವಿಶ್ವಗುರು ಬಸವಣ್ಣನವರು ಅವರ ಸರಳ ಸಜ್ಜನಿಕೆಯ ಜೀವನದ ಮೌಲ್ಯಗಳನ್ನ ನಾವೆಲ್ಲರೂ ಪಾಲಿಸೋಣ, ಅವರು ಸಮಾಜಕ್ಕೆ ನೀಡಿದ ಏಕತೆಯ ಸಂದೇಶಗಳನ್ನ ಅನುಸರಿಸೋಣ ಎಂದರು. ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಸದಸ್ಯ ದಿಲೀಪ್, ಕಚೇರಿ ಸಿಬ್ಬಂದಿಗಳು, ಸಂಜೀವಿನಿ ಹಾಗೂ ಸ್ವಾಸಹಾಯ ಒಕ್ಕೂಟದ ಸದಸ್ಯರು, ಸ್ಥಳೀಯ ಉದ್ಯಮಿಗಳು ಹಾಜರಿದ್ದರು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಅವರು ಸ್ವಾಗತಿಸಿ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading